ಮಂಡ್ಯ: ಶ್ರೀ ಕ್ಷೇತ್ರ ಚಂಚನಗಿರಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭೇಟಿ ನೀಡಿ, ದೇವರ ದರ್ಶನ ಪಡೆದು ಚುಂಚಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಶ್ರೀಕ್ಷೇತ್ರದ ಆದಿ ದೈವ ಶ್ರೀ ಕಾಲಭೈರವೇಶ್ವರನ ದರ್ಶನ ಪಡೆದು, ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾಗಿರುವ ಶ್ರೀ ನಿರ್ಮಲಾನಂದ ಸ್ವಾಮೀಜಿಯನ್ನು ಭೇಟಿಯಾಗಿ, ಮಾತುಕತೆ ನಡೆಸಿ ಸ್ವಾಮೀಜಿ ಬಳಿ ಆಶೀರ್ವಾದ ಪಡೆದಿದ್ದಾರೆ