Monday, April 21, 2025
Google search engine

Homeಅಪರಾಧಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಬೆಂಗಳೂರು: 10 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮೀಷವೊಡ್ಡಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತನನ್ನು ಹೆಬ್ಬಾಳ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.

ಉದ್ಯೋಗಕ್ಕಾಗಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ ರಾಜೇಶ್‌ ನಾಗೇನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ. ನೇಪಾಳ ಮೂಲದ ಬಾಲಕಿಯ ಪೋಷಕರು ನಾಗೇನಹಳ್ಳಿಯ ಅಪಾರ್ಟ್‌ಮೆಂಟ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಕಾಮುಕ ರಾಜೇಶ್ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದು ತಕ್ಷಣ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಹೆಬ್ಬಾಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. ಪೋಕ್ಸೋ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular