ಬೆಂಗಳೂರು: ಪ್ರಜ್ವಲ್ ರೇವಣ್ಣ ತಪ್ಪು ಮಾಡಿಲ್ಲ ಅಂದ ಮೇಲೆ ಜೆಡಿಎಸ್‌ನಿಂದ ಅಮಾನತು ಮಾಡಿದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.
ಪ್ರೆಸ್ ಕ್ಲಬ್ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ಸರ್ಕಾರ ಕಾನೂನು ಪ್ರಕಾರ ತನಿಖೆ ನಡೆಸುತ್ತದೆ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ ಕೊಡಿಸಲಾಗುತ್ತದೆ. ನಮ್ಮ ಸರ್ಕಾರ ಯಾವುದನ್ನೂ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೇವರಾಜೇಗೌಡ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡದಂತೆ ಬಿಜೆಪಿಗೆ ಪತ್ರ ಬರೆದಿದ್ದರು. ಈ ವಿಚಾರ ತಿಳಿದಿದ್ದರೂ ಟಿಕೆಟ್ ನೀಡಿದ್ದು ಯಾಕೆ? ಪ್ರಜ್ವಲ್ ಪರವಾಗಿ ಪ್ರಚಾರ ಮಾಡಿದವರು ಎಂದು ಕೇಳಿದರು.
ದೇವರಾಜೇಗೌಡ ಆಡಿಯೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಡಿಯೋ ಬಗ್ಗೆ ಏನಾದರೂ ದಾಖಲೆ ಇದೆಯಾ? ಆಡಿಯೋ ಬಗ್ಗೆ ದಾಖಲೆ ಏನಿದೆ? ತನಿಖೆ ನಡೆಯುತ್ತಿದೆ, ಸತ್ಯಾಸತ್ಯತೆ ಹೊರಗೆ ಬರಲಿ ಎಂದು ಹೇಳಿದರು.