ಮಂಡ್ಯ: ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ರವರ ಹುಟ್ಟುಹಬ್ಬ ಹಿನ್ನಲೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹುಟ್ಟುಹಬ್ಬ ಆಚರಿಸಿದ್ದಾರೆ.

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ. ಮುಂದಿನ ದಿನಗಳಲ್ಲಿ ಅವರ ರಾಜಕೀಯ ಸ್ಥಾನ ಹೆಚ್ಚಿನ ಮಟ್ಟಕ್ಕೇರಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರಾರ್ಥಿಸಿದ್ದಾರೆ.