Sunday, April 20, 2025
Google search engine

Homeಅಪರಾಧಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ರಾಜಗೋಪಾಲನಗರ ಠಾಣೆಯ ಎಎಸ್‌ಐ ರಾಮಲಿಂಗಯ್ಯ, ಹೆಡ್ ಕಾನ್ಸ್‌ಟೇಬಲ್ ಪ್ರಸನ್ನ ಕುಮಾರ್ ಎಂಬುವವರನ್ನು ಸಸ್ಪೆಂಡ್ ಮಾಡಲಾಗಿದೆ.

ರಾಮಲಿಂಗಯ್ಯ ಮತ್ತು ಪ್ರಸನ್ನ ಕುಮಾರ್ ಅವರು ಹೊಯ್ಸಳ ವಾಹನದಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಇದನ್ನು ಕೆಲವರು ವಿಡಿಯೋ ಮಾಡಿದ್ದು ಬಳಿಕ ಪೊಲೀಸ್ ಕಳ್ಳ ಎಂದು ಅಟ್ಟಿಸಿಕೊಂಡು ಹೋಗಿದ್ದರು. ಈ ಘಟನೆ ಪೊಲೀಸ್ ಇಲಾಖೆಗೆ ಬಹಳ ಮುಜುಗರ ತಂದಿತ್ತು. ಹೀಗಾಗಿ ಪೊಲೀಸ್ ಕಮಿಷನರ್ ತನಿಖೆಗೆ ಆದೇಶ ನೀಡಿದ್ದರು. ಸದ್ಯ ಈಗ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular