Monday, April 21, 2025
Google search engine

HomeUncategorizedರಾಷ್ಟ್ರೀಯಚೆನ್ನೈನ ಎನ್‌ಐಎ ಕಚೇರಿಗೆ ಕರೆ ಮಾಡಿ ಪ್ರಧಾನಿ ಮೋದಿಗೆ ಜೀವ ಬೆದರಿಕೆ: ತನಿಖೆ ಚುರುಕು

ಚೆನ್ನೈನ ಎನ್‌ಐಎ ಕಚೇರಿಗೆ ಕರೆ ಮಾಡಿ ಪ್ರಧಾನಿ ಮೋದಿಗೆ ಜೀವ ಬೆದರಿಕೆ: ತನಿಖೆ ಚುರುಕು

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಕಚೇರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆಯನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಅಪರಿಚಿತ ವ್ಯಕ್ತಿ ಇಂದು ಬೆಳಿಗ್ಗೆ ಪುರಸೈವಾಕಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಐಎ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಚೆನ್ನೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ತನಿಖೆ ಕೈಗೊಂಡಿರುವ ಸೈಬರ್​ ಅಪರಾಧ ವಿಭಾಗದ ಪೊಲೀಸರು, ಯಾವ ಪ್ರದೇಶದಿಂದ ಬೆದರಿಕೆ ಕರೆ ಬಂದಿದೆ?, ಯಾವ ಸಿಮ್ ಕಾರ್ಡ್ ಬಳಸಲಾಗಿದೆ? ಎಂಬೆಲ್ಲಾ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular