ಕೆ.ಆರ್.ಪೇಟೆ: ಮಳೆಯ ಅಬ್ಬರಕ್ಕೆ ಮೇಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಜಾಗನಕೆರೆ ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ಗುಡುಗು ಸಹಿತ ಸುರಿದ ಭಾರೀ ಮಳೆಯಿಂದ ಅವಾಂತರವಾಗಿದ್ದು, ಮನೆ ಪಕ್ಕದ ಕಾಂಪೌಂಡ್ ಕುಸಿದು ಬಿದ್ದು ಗ್ರಾಮದ ಪ್ರಕಾಶ್ ಎಂಬುವವರಿಗೆ ಸೇರಿದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಮೇಕೆ ಸಾವನ್ನಪ್ಪಿದೆ.
ಸ್ಥಳಕ್ಕೆ ಸಾರಂಗಿ ಗ್ರಾಮ ಪಂಚಾಯತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಿಹಾರ ಕೋಡಿಸುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.