Sunday, April 20, 2025
Google search engine

Homeರಾಜ್ಯವ್ಯಕ್ತಿಯ ಸಾವಿನಲ್ಲಿ ಅನುಮಾನ: ದಫನ ಮಾಡಿದ ಮೃತದೇಹ ಮೇಲಕ್ಕೆತ್ತಿ ಮರು ತನಿಖೆಗೆ ಮುಂದಾದ ಪೊಲೀಸರು

ವ್ಯಕ್ತಿಯ ಸಾವಿನಲ್ಲಿ ಅನುಮಾನ: ದಫನ ಮಾಡಿದ ಮೃತದೇಹ ಮೇಲಕ್ಕೆತ್ತಿ ಮರು ತನಿಖೆಗೆ ಮುಂದಾದ ಪೊಲೀಸರು

ಮಂಗಳೂರು(ದಕ್ಷಿಣ ಕನ್ನಡ): 18 ದಿನಗಳ ಹಿಂದೆ ಸಾವನ್ನಪ್ಪಿದ್ದ ವ್ಯಕ್ತಿಯ ಸಾವಿನಲ್ಲಿ ಸಂಶಯ ಇರುವುದಾಗಿ ಆರೋಪಿಸಿ ಮೃತರ ಸಹೋದರ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ದಫನ ಮಾಡಿದ ಮೃತದೇಹವನ್ನು ಮೇಲಕ್ಕೆತ್ತಿ ಮರು ತನಿಖೆ ಮಾಡುವ ಕಾರ್ಯಕ್ಕೆ ಮಂಜೇಶ್ವರ ಹಾಗೂ ವಿಟ್ಲ ಪೊಲೀಸರು ಮುಂದಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ನಡೆದಿದೆ.

ಕನ್ಯಾನ ಬಳಿಯ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಮೃತಪಟ್ಟವರು. ಇವರು ಮೇ 6 ರಂದು ಮೃತಪಟ್ಟಿದ್ದು, ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಜುಮ್ಮಾ ಮಸೀದಿಯಲ್ಲಿ ದಫನ ನಡೆಸಲಾಗಿತ್ತು. ಇವರ ಸಾವಿನಲ್ಲಿ ಅನುಮಾನವಿದೆ ಅದೊಂದು ಸಹಜ ಸಾವಲ್ಲ ಎಂದು ಆರೋಪಿಸಿ ಮೃತರ ಸಹೋದರ ಇಬ್ರಾಹಿಂ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಮಂಜೇಶ್ವರ ಪೊಲೀಸರು, ಧಪನಗೊಂಡ ದೇಹವನ್ನು ಮೇಲಕ್ಕೆತ್ತಿ ಶವ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶ ಪಡೆದು ಮಂಜೇಶ್ವರ ಪೊಲೀಸರು ರಹ್ಮಾನಿಯಾ ಜುಮ್ಮಾ ಮಸೀದಿಗೆ ಗುರುವಾರ ಬೆಳಿಗ್ಗೆ ಆಗಮಿಸಿದ್ದಾರೆ. ಮಂಗಳೂರಿನ ಯೆನೋಪಯ ಆಸ್ಫತ್ರೆಯ ಫಾರೆನ್ಸಿಕ್ ವಿಭಾಗದ ಸಿಬ್ಬಂದಿಗಳು, ಕಾಸರಗೋಡು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮರ ನೆರವು ನೀಡಲಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಸ್ಥಳದಲ್ಲಿ ಉಪಸ್ಥಿತರಿದ್ದಾರೆ. ಸ್ಥಳದಲ್ಲಿ ಕುತೂಹಲಿಗಳು ಬೀಡು ಬಿಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular