ಮದ್ದೂರು: ಮದ್ದೂರು ಪಟ್ಟಣದ ಪೊಲೀಸರು ಪ್ರವಾಸಿ ಮಂದಿರ ವೃತ್ತದಿಂದ ಕೊಲ್ಲಿ ಇರುತ್ತದೆ ಅವರಿಗೆ ಪೇಟೆ ಬೀದಿ ಮುಖಾಂತರ ಹೆಲ್ಮೆಟ್ ಧರಿಸಿ ಜಾಗೃತಿ ಜಾಥಾ ನಡೆಸಿದರು.
ಸಾರ್ವಜನಿಕರಿಗೆ ಅರಿವು ಮೂಡಿಸುವ ಹಿನ್ನೆಲೆ ಪೊಲೀಸ್ ಇಲಾಖೆ ವತಿಯಿಂದ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಪ್ರತಿದಿನ ಆಯೋಜನೆ ಮಾಡಲಾಗುತ್ತಿದ್ದು, ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ ಸೀಟ್ ಬೆಲ್ಟ್ ಧರಿಸಿ ಸಂಚಾರಿ ನಿಯಮ ಪಾಲಿಸಿ ಎಂಬ ಘೋಷಣೆಗಳನ್ನು ಕೂಗುತ್ತಾ ಬೈಕ್ ಜಾಥಾ ನಡೆಸಿದರು.
ಈ ವೇಳೆ ಮದ್ದೂರು ಪಟ್ಟಣದ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ಮಂಜುನಾಥ್, ಸಂಚಾರಿ ವಿಭಾಗದ ಪಿಎಸ್ಐ ಮಹೇಶ್ ನೇತೃತ್ವದಲ್ಲಿ ಜಾಗೃತಿ ಜಾಥ ನಡೆಸಲಾಯಿತು.