ಹರಿಯಾಣ: ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್‌ವೊಂದು ಮಿನಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ೭ ಮಂದಿ ಮೃತಪಟ್ಟು, ೨೫ ಮಂದಿ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಂಬಾಲ ದೆಹಲಿ ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರವಾಸಿಗರು ಮಿನಿ ಬಸ್‌ನಲ್ಲಿ ವೈಷ್ಣೋದೇವಿಗೆ ತೆರಳುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದಿದೆ. ಮೃತಪಟ್ಟ ೭ ಮಂದಿ ಒಂದೇ ಕುಟುಂಬದವರಾಗಿದ್ದು, ೨೫ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಒಂದು ಮಗು ಕೂಡ ಸೇರಿದೆ.
ಗಾಯಗೊಂಡವರನ್ನು ಸಮೀಪದ ಆದೇಶ್ ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವು ಗಾಯಾಳುಗಳನ್ನು ಅಂಬಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಟ್ರಕ್‌ಅನ್ನು ಪೊಲೀಸರು ವಳಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ.