ಮದ್ದೂರು: ತಾಲೂಕಿನ ಹಲವು ಭಾಗಗಳಲ್ಲಿ ಶಿಕ್ಷಕರನ್ನು ಭೇಟಿ ಮಾಡಿದ ಬಿ ಎಸ್ ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿ ಎಸ್ ಪಿ ಬೆಂಬಲಿತ ಅಭ್ಯರ್ಥಿ ಡಾ.ಹಾ.ರ ಮಹೇಶ್ ಪರ ಮತಯಾಚನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಈ ಬಾರಿ ನಮ್ಮ ಬೆಂಬಲಿತ ಅಭ್ಯರ್ಥಿಯಾಗಿ ಡಾ.ಹಾ.ರ ಮಹೇಶ್ ರವರು ಸ್ಪರ್ಧಿಸಿದ್ದು, ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಂಥ ವ್ಯಕ್ತಿಗಳನ್ನು ಶಿಕ್ಷಕರು ಆರಿಸಬೇಕಾಗಿದೆ ಶಿಕ್ಷಕರಿಗೆ ಹಣ ಎಂಡ ಹಂಚುವ ನಾಯಕರನ್ನು ದೂರ ಇಟ್ಟು ಹೋರಾಟ ಮನಭಾವವುಳ್ಳ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಎಂದರು.