Monday, April 21, 2025
Google search engine

Homeರಾಜ್ಯಟಿಪ್ಪರ್ ಲಾರಿ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ರೂ. ೫೦೦ ದಂಡ ವಿಧಿಸಿದ ಪೊಲೀಸರು

ಟಿಪ್ಪರ್ ಲಾರಿ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ರೂ. ೫೦೦ ದಂಡ ವಿಧಿಸಿದ ಪೊಲೀಸರು

ಹೊನ್ನಾವರ: ಪಟ್ಟಣದಲ್ಲಿ ಟಿಪ್ಪರ್ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ಇಲ್ಲಿನ ಪೊಲೀಸರು ರೂ. ೫೦೦ ದಂಡ ವಿಧಿಸಿದ್ದಾರೆ. ಪೊಲೀಸರು ದಂಡ ವಿಧಿಸಿರುವ ರಶೀದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೆಲ್ಮೆಟ್ ಧರಿಸಿಲ್ಲ ಎಂದು ಟಿಪ್ಪರ್ ಚಾಲಕ ಚಂದ್ರಕಾಂತ ಎಂಬವರಿಗೆ ೫೦೦ ದಂಡ ಹಾಕಲಾಗಿದೆ. ಹೊನ್ನಾವರದಲ್ಲಿ ಟಿಪ್ಪರ್ ಮಾಲೀಕ ತನ್ನ ವಾಹನವನ್ನು ಮರಳು ಸಾಗಾಟಕ್ಕೆ ಕಳುಹಿಸಿದ್ದ ವೇಳೆ ಟಿಪ್ಪರ್ ತಡೆದ ಹೊನ್ನಾವರ ಪೊಲೀಸರು, ಚಾಲಕ ಚಂದ್ರಕಾಂತ ಎಂಬವರಿಂದ ೫೦೦ ದಂಡ ವಸೂಲಿ ಮಾಡಿದ್ದಾರೆ. ರಶೀದಿ ನೋಡಿದ ಚಾಲಕನಿಗೆ ಶಾಕ್ ಆಗಿದೆ. ಪೊಲೀಸರು ನೀಡಿರುವ ರಶೀದಿ ಪ್ರಕಾರ ಇನ್ನು ಮುಂದೆ ಹೊನ್ನಾವರಲ್ಲಿ ಟಿಪ್ಪರ್ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸದೆ ಇದ್ದರೆ ದಂಡ ಬೀಳಲಿದೆ, ಇದೇನು ಹೊಸ ನಿಯಮ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಿಎಸ್‌ಐ ಸಂತೋಷಕುಮಾರ್, ಟಿಪ್ಪರ್ ಚಾಲಕ ಸಮವಸ್ತ್ರ ಧರಿಸಿರಲಿಲ್ಲ. ಅದಕ್ಕೆ ೫೦೦ ದಂಡ ವಿಧಿಸಲಾಗಿದೆ. ಆದರೆ ಕಣ್ತಪ್ಪಿನಿಂದ ಹೆಲ್ಮೆಟ್ ಧರಿಸದ್ದರಿಂದ ದಂಡ ಎಂದು ರಶೀದಿ ನೀಡಲಾಗಿದೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular