Sunday, April 20, 2025
Google search engine

Homeರಾಜಕೀಯಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ - ಮುಖ್ಯಮಂತ್ರಿ...

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಐಪಿಸಿ 353ರ ಪ್ರಕಾರ  ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್  ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ  ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದರು.

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರುಪ್ರಶ್ನಿಸಿದರು.

RELATED ARTICLES
- Advertisment -
Google search engine

Most Popular