Saturday, April 19, 2025
Google search engine

Homeಅಪರಾಧರೇವ್ ಪಾರ್ಟಿ ಪ್ರಕರಣ: ಐವರು ಆರೋಪಿಗಳ ಬ್ಯಾಂಕ್ ಅಕೌಂಟ್ ಸೀಜ್

ರೇವ್ ಪಾರ್ಟಿ ಪ್ರಕರಣ: ಐವರು ಆರೋಪಿಗಳ ಬ್ಯಾಂಕ್ ಅಕೌಂಟ್ ಸೀಜ್

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದ ತನಿಖೆ ಚುರುಕುಗೊಂಡಿದೆ.

ಬಂಧಿತರ ಐವರು ಆರೋಪಿಗಳ ಅಕೌಂಟ್‌ನಲ್ಲಿದ್ದ ಹಣವನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿದ್ದಾರೆ. ಆರೋಪಿಗಳ ಅಕೌಂಟ್‌ನಲ್ಲಿ ಲಕ್ಷಲಕ್ಷ ಹಣ ಪತ್ತೆಯಾಗಿತ್ತು. ಹೀಗಾಗಿ ಸಿಸಿಬಿ ಅಧಿಕಾರಿಗಳು ಎಲ್ಲಾ ಅಕೌಂಟ್‌ಗಳನ್ನ ಫ್ರೀಜ್ ಮಾಡಿಸಿದ್ದಾರೆ. ಅಲ್ಲದೆ ಆರೋಪಿಗಳ ಮೊಬೈಲ್ ಮಿರರ್ ಇಮೇಜ್ ಮಾಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಸೋಮವಾರ ಕೋರ್ಟ್ ಗೆ ಅರ್ಜಿ ಹಾಕಿ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಸಿಬಿ ಹಾಗೂ ಆರೋಪಿಗಳ ವಿಚಾರಣೆ ಬಳಿಕ ನಟಿ ಹೇಮ ಸೆರಿದಂತೆ ಪಾರ್ಟಿಯಲ್ಲಿದ್ದವರಿಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದೆ.

ವಾಸು ಎಂಬಾತನ ಹುಟ್ಟುಹಬ್ಬದ ಅಂಗವಾಗಿ ಶೀರ್ಷಿಕೆಯಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ನೂರರಿಂದ ನೂರೈವತ್ತು ಮಂದಿ ಜಮಾವಣೆಗೊಂಡಿದ್ದರು ಎನ್ನಲಾಗಿದೆ. ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದೆ. ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿತ್ತು. ಪಾರ್ಟಿಯಲ್ಲಿ ಭಾಗಿಯಾಗಿದ್ದ ೭೩ ಮಂದಿ ಪುರುಷರಲ್ಲಿ ೫೯ ಮಂದಿ ಹಾಗೂ ೩೦ ಮಂದಿ ಯುವತಿಯರ ಪೈಕಿ ೨೭ ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ತೆಲುಗು ಕಿರುತೆರೆ ನಟಿ ಹೇಮಾ ಪಾಲ್ಗೊಂಡಿರುವುದು ಕೂಡ ಬಯಲಾಗಿತ್ತು.

RELATED ARTICLES
- Advertisment -
Google search engine

Most Popular