Sunday, April 6, 2025
Google search engine

Homeಅಪರಾಧಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಹಗರಿಬೊಮ್ಮನಹಳ್ಳಿ ಪುರಸಭೆ ಸಿಬ್ಬಂದಿ

ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಹಗರಿಬೊಮ್ಮನಹಳ್ಳಿ ಪುರಸಭೆ ಸಿಬ್ಬಂದಿ

ವಿಜಯನಗರ: ಮಂಗಳವಾರ ಫಾರಂ 3 ನೀಡಲು  2 ಸಾವಿರ ಲಂಚ ಪಡೆಯುತ್ತಿದ್ದ ಹಗರಿಬೊಮ್ಮನಹಳ್ಳಿ ಪುರಸಭೆಯ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಪಟ್ಟಣದ ರಾಮ್ ರಹೀಂ ನಗರದ ನಿವಾಸಿ ರಾಜಸಾಬ್ ಎಂಬುವವರು ಫಾರಂ-3 ಪಡೆಯಲು ಅರ್ಜಿ ಸಲ್ಲಿಸಿದ್ದರು. ಪುರಸಭೆ ಸಿಬ್ಬಂದಿ ಬಿಲ್ ಕಲೆಕ್ಟರ್ ಹನುಮಂತಪ್ಪ ದಾಖಲೆ ನೀಡಲು  20 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ  2 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್‌ ಪಿ ಸುರೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಪುರಸಭೆ ಕಚೇರಿಯಲ್ಲಿ ಪ್ರಕರಣದ ತನಿಖೆ ಪ್ರಕ್ರಿಯೆ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular