ಮಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮುಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಒಂದು ಗಂಟೆಗಳ ಕಾಲ ದೇವಸ್ಥಾನದ ಗರ್ಭಗುಡಿಯ ಮುಂಭಾಗದಲ್ಲೇ ನಿಂತು ಸರ್ವ ಸೇವೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟೆಯಾಗಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರುತ್ತೇನೆ. ನಾನು ರಾಜ್ಯದಲ್ಲಿ ಕಳೆದ ೪೦ ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. ೨೫ ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ, ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ.
ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ.
ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರೋ ಬಗ್ಗೆಯೂ ಗೊತ್ತಿಲ್ಲ. ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅಲ್ಲಿಂದ ಅವರು ತೆರಳಿದ್ದಾರೆ.