ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಇಂದು ಸೋಮವಾರ ಪುಷ್ಪ ನಮನ ಸಲ್ಲಿಸಿದರು.
ನಂತರ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ನೆಹರೂ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಅಧ್ಯಕ್ಷ, ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ ಕೆ ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.