Sunday, April 20, 2025
Google search engine

Homeರಾಜ್ಯಜವಾಹರಲಾಲ್ ನೆಹರೂ ಪುಣ್ಯ ತಿಥಿ : ಕಾಂಗ್ರೆಸ್ ನಾಯಕರಿಂದ ಪುಷ್ಪ ನಮನ

ಜವಾಹರಲಾಲ್ ನೆಹರೂ ಪುಣ್ಯ ತಿಥಿ : ಕಾಂಗ್ರೆಸ್ ನಾಯಕರಿಂದ ಪುಷ್ಪ ನಮನ

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ೬೦ನೇ ಪುಣ್ಯತಿಥಿ. ಈ ಅಂಗವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನೆಹರೂ ಅವರ ಸ್ಮಾರಕ ಶಾಂತಿವನಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.

ನಗರದ ಅವರ ಶಾಂತಿ ವನ ಸ್ಮಾರಕಕ್ಕೆ ಭೇಟಿ ನೀಡಿದ ಸೋನಿಯಾ ಗಾಂಧಿ ಅವರು ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಚಾಚಾ ನೆಹರು ಎಂದು ಪ್ರೀತಿಯಿಂದ ಕರೆಯಲ್ಪಡುವ ಜವಾಹರಲಾಲ್ ನೆಹರು ಅವರು ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನವೆಂಬರ್ ೧೪, ೧೮೮೯ ರಂದು ಜನಿಸಿದ್ದರು. ನೆಹರು ಅವರು ಆಗಸ್ಟ್ ೧೫, ೧೯೪೭ ರಂದು ಭಾರತದ ಪ್ರಧಾನ ಮಂತ್ರಿಯಾಗಿ ೧೮ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular