Sunday, April 20, 2025
Google search engine

Homeಅಪರಾಧಕೆರೆಗೆ ಈಜಲು ಹೋದ ಬಾಲಕ ನೀರುಪಾಲು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಕೆರೆಗೆ ಈಜಲು ಹೋದ ಬಾಲಕ ನೀರುಪಾಲು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಚಿಕ್ಕಮಗಳೂರು: ಕೆರೆಗೆ ಈಜಲು ತೆರಳಿದ ಬಾಲಕನೋರ್ವ ನೀರುಪಾಲಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ಸೋಮವಾರ ನಡೆದಿದೆ.

ಮೃತ ಬಾಲಕನನ್ನು ಗಾಂಧಿನಗರ ಬಡಾವಣೆಯ ಶಶಾಂಕ್ (13) ಎಂದು ಗುರುತಿಸಲಾಗಿದೆ.

ನಾಲ್ವರು ವಿದ್ಯಾರ್ಥಿಗಳು ಜೊತೆಗೂಡಿ ಕೋಟೆ ಕೆರೆಗೆ ಈಜಲು ತೆರಳಿದ್ದಾರೆ ಈ ವೇಳೆ ಶಶಾಂಕ್ ನೀರಿನಡಿ ಕೆಸರಿನಲ್ಲಿ ಕಾಲು ಸಿಲುಕಿಕೊಂಡು ಮೇಲೆ ಬರಲಾಗದೆ ಮೃತಪಟ್ಟಿದ್ದಾನೆ ಕೂಡಲೇ ಜೊತೆಗಿದ್ದ ಇತರರು ವಿಚಾರವನ್ನು ಸ್ಥಳೀಯರಿಗೆ ಹೇಳಿದ್ದಾರೆ.

ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ತಂಡ ದೌಡಾಯಿಸಿ ನೀರಿನಲ್ಲಿ ಮುಳುಗಿದ್ದ ಬಾಲಕನನ್ನು ಮೇಲಕ್ಕೆತ್ತಿದ್ದಾರೆ ಆದರೆ ದುರದೃಷ್ಟವಶಾತ್ ಅಷ್ಟೋತ್ತಿಗಾಗಲೇ ಬಾಲಕನ ಪ್ರಾಣಪಕ್ಷಿ ಹಾರಿಹೋಗಿತ್ತು.

ಬಾಲಕನ ಮೃತದೇಹ ನೀರಿನಿಂದ ಹೊರತರುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular