Tuesday, April 22, 2025
Google search engine

Homeರಾಜಕೀಯಎಸ್​​ ಟಿ ಬೋರ್ಡ್​​ ನಲ್ಲಿ ನೌಕರ ಆತ್ಮಹತ್ಯೆ ಪ್ರಕರಣ: ಸಚಿವ ನಾಗೇಂದ್ರ ವಜಾಕ್ಕೆ ಬಿ ವೈ...

ಎಸ್​​ ಟಿ ಬೋರ್ಡ್​​ ನಲ್ಲಿ ನೌಕರ ಆತ್ಮಹತ್ಯೆ ಪ್ರಕರಣ: ಸಚಿವ ನಾಗೇಂದ್ರ ವಜಾಕ್ಕೆ ಬಿ ವೈ ವಿಜಯೇಂದ್ರ ಆಗ್ರಹ

ಕಲಬುರಗಿ: ಎಸ್​​ ಟಿ ಬೋರ್ಡ್​​ ನಲ್ಲಿ  ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು ವಜಾ ಮಾಡಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಕಲಬುರಗಿಯಲ್ಲಿ ಮಾತನಾಡಿದ ಅವರು, ನಿಜವಾಗಿಯೂ ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್. ಕೂಡಲೆ ಸಿಎಂ ಸಿದ್ದರಾಮಯ್ಯ ಆ ಇಲಾಖೆಯ ಸಚಿವರನ್ನು ಮಂತ್ರಿ ಮಂಡಲದಿಂದ ಕೈ ಬಿಡಬೇಕು ಎಂದರು.

ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ಈ ವಿಚಾರವಾಗಿ ನಾವು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅವರು ಹೇಳಿದರು.

ಏನಿದು ಪ್ರಕರಣ ?

ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿತ್ತು. ಇದಕ್ಕೆ ಪೂರಕ ಅಂಶಗಳು ಅವರು ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿತ್ತು.

RELATED ARTICLES
- Advertisment -
Google search engine

Most Popular