ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನೀಲಕಂಠನಹಳ್ಳಿ ಗ್ರಾಮದ ಜಮೀನಿನಲ್ಲಿರುವ ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟ ಕಾಡಾನೆಗಳು ಹಿಂಡು ಬೀಡುಬಿಟ್ಟಿವೆ.
ನೆನ್ನೆಯಷ್ಟೆ ಹೊಳೆ ಆಂಜನೇಯನ ದೇಗುಲದ ಶಿಂಷಾ ನದಿಯ ಬಳಿ ಆನೆಗಳು ಪ್ರತ್ಯಕ್ಷವಾಗಿವೆ.
6 ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸಲು ರಾತ್ರಿ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಕಾರ್ಯಾಚರಣೆ ವಿಫಲವಾಗಿ ಕಬ್ಬಿನ ಗದ್ದೆಯಲ್ಲೆ ಕಾಡಾನೆಗಳು ಬೀಡುಬಿಟ್ಟಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದಾರೆ.
ಆನೆಗಳು ಇರುವ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.