Saturday, April 19, 2025
Google search engine

Homeಅಪರಾಧನಿಯಂತ್ರಣ ತಪ್ಪಿ ಸರ್ಕಾರಿ‌ ಬಸ್ ಗೆ ಲಾರಿ ಡಿಕ್ಕಿ: ಎಂಟು ಮಂದಿಗೆ ಗಾಯ

ನಿಯಂತ್ರಣ ತಪ್ಪಿ ಸರ್ಕಾರಿ‌ ಬಸ್ ಗೆ ಲಾರಿ ಡಿಕ್ಕಿ: ಎಂಟು ಮಂದಿಗೆ ಗಾಯ

ಮಂಗಳೂರು (ದಕ್ಷಿಣ ಕನ್ನಡ): ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಸರ್ಕಾರಿ‌ಬಸ್ ಗೆ ಡಿಕ್ಕಿಯಾಗಿ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ.

ಬಿಸಿರೋಡು – ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪದ ಕಾರಿಂಜ ಕಾಡಬೆಟ್ಟು ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಬಸ್ ಗೆ ಡಿಕ್ಕಿಯಾಗಿದೆ.

ಈ ಸಂದರ್ಭದಲ್ಲಿ ಬಸ್ ಚಾಲಕ , ಅದರಲ್ಲಿದ್ದ ಪ್ರಯಾಣಿಕರು ಹಾಗೂ ಲಾರಿ ಚಾಲಕನಿಗೆ ಗಾಯವಾಗಿದೆ. ಲಾರಿ ಚಾಲಕ ಚಿತ್ರದುರ್ಗ ಸಮೀಪದ ಹಿರಿಯೂರಿ‌ನ ಮಹೇಶ್ ,ಬಸ್ ಚಾಲಕ ಉಮೇಶ್ ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular