ಮೈಸೂರು: ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ 18ನೇ ವಾರ್ಷಿಕೋತ್ಸವದ ಅಂಗವಾಗಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಹಾಗೂ ಸಮೂಹ ದೇವಾಲಯಗಳ ನೌಕರ ಸಂಘದ ಉಪಾಧ್ಯಕ್ಷ ಹಾಗೂ ದೇವಸ್ಥಾನದ ಸೇವಾ ಸಿಬ್ಬಂದಿ ಎಂ ಡಿ ಸೋಮಶೇಖರ್ ರವರಿಗೆ ಧಾರ್ಮಿಕ ಕ್ಷೇತ್ರದಿಂದ ಗುರುತಿಸಿ ಚಾಣಕ್ಯ ಸೇವಾ ರತ್ನ ಪ್ರಶಸ್ತಿಯನ್ನು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಹಾಗೂ ಇನ್ನಿತರ ಪದಾಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿರುವ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಎಂ ಡಿ ಸೋಮಣ್ಣ ರವರ ಪತ್ನಿ ಎನ್ ಎಸ್ ಮಂಜುಳಾ, ಟ್ರಸ್ಟ್ ಪದಾಧಿಕಾರಿಗಳಾದ ಜಿ ರಾಘವೇಂದ್ರ, ಬೈರತಿ ಲಿಂಗರಾಜು, ಹರೀಶ್ ನಾಯ್ಡು,ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಅಶ್ವಿನಿ, ದುರ್ಗಾ ಪ್ರಸಾದ್, ಎಸ್ ಎನ್ ರಾಜೇಶ್, ರಾಕೇಶ್, ಹಾಗೂ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.