ಮಂಗಳೂರು: ಮಂಗಳೂರಿನ ಕಂಕನಾಡಿ ಮಸೀದಿ ರಸ್ತೆಯಲ್ಲಿ ನಮಾಜ್ ವಿವಾದಕ್ಕೆ ಸಂಬಂಧಿಸಿದಂತೆ ಕೇಸ್ ಗೆ ‘ಬಿ’ ರಿಪೋರ್ಟ್ ಸಲ್ಲಿಕೆ ಹಾಗೂ ಶರಣ್ ಪಂಪ್ ವೆಲ್ ವಿರುದ್ಧ ಎಫ್ಐಆರ್ ಗೆ ವಿರೋಧ ವ್ಯಕ್ತಪಡಿಸಿ ಮಂಗಳೂರಿನಲ್ಲಿ ಮಂಗಳೂರಿನ ಕದ್ರಿಯಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳದಿಂದ ಪ್ರತಿಭಟನೆ ನಡೆಸಲಾಗಿದೆ.
ಕದ್ರಿ ಠಾಣೆ ಇನ್ಸ್ ಪೆಕ್ಟರ್ ಸೋಮಶೇಖರ್ ಗೆ ಕಡ್ಡಾಯ ರಜೆ ಮೇಲೆ ಕಳಿಸಿರೋ ಇಲಾಖೆ ಹಾಗೂ ಪೊಲೀಸರ ನಡೆಯನ್ನು ಖಂಡಿಸಿ ವಿಎಚ್ ಪಿ ಪ್ರತಿಭಟನೆ ನಡೆಸಿದೆ.
ನಮಾಜ್ ಮಾಡಿದವರ ಕೇಸ್ ಗೆ ಬಿ ರಿಪೋರ್ಟ್ ಸಲ್ಲಿಸಿ ಶರಣ್ ಮೇಲೆ ಎಫ್ಐಆರ್ ಹಾಕಿದ್ದಾರೆಂದು ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. 3 ಪಿ.ಐ, 5 ಪಿ.ಎಸ್.ಐ, 2 ksrp ತುಕಡಿ ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.