Monday, April 21, 2025
Google search engine

Homeರಾಜಕೀಯಮಸೀದಿ ಹೊರಗೆ ಪ್ರಾರ್ಥನೆ: ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ- ಬಿ.ರಮಾನಾಥ ರೈ

ಮಸೀದಿ ಹೊರಗೆ ಪ್ರಾರ್ಥನೆ: ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ- ಬಿ.ರಮಾನಾಥ ರೈ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಕಂಕನಾಡಿ ಮಸೀದಿಯ ಹೊರಗಡೆಯದ್ದು ಅನಗತ್ಯ ವಿಚಾರ. ದೇವರು ಒಬ್ಬರೇ. ಮಸೀದಿ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಧರ್ಮಗಳ ಕಾರ್ಯಕ್ರಮಗಳು ಕೆಲವೊಮ್ಮೆ ರಸ್ತೆಯಲ್ಲಿ ನಡೆಯುತ್ತವೆ. ಅದನ್ನು ತಪ್ಪು ಎಂದು ಹೇಳುತ್ತಾ ಹೋಗಲು ಸಾಧ್ಯ ಇಲ್ಲ. ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ, ಕೃತ್ಯ ನಡೆದಾಗಲೂ ಸುಮೋಟೋ ಪ್ರಕರಣ ಆಗಿಲ್ಲ. ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ. ಈ ರೀತಿ ಆ ಪ್ರಾರ್ಥನೆಯ ವೀಡಿಯೋ ಮಾಡಿ ಸೌಹಾರ್ದಕ್ಕೆ ಧಕ್ಕೆ ತರುವ ಕಾರ್ಯ ಮಾಡಿದವರ ಮೇಲೆ ಕಾನೂನು ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದರು.

RELATED ARTICLES
- Advertisment -
Google search engine

Most Popular