ಮಂಗಳೂರು: ಜೂ.೧ರಿಂದ ಮೀನುಗಾರಿಕೆಯನ್ನು ನಿಷೇಧಿಸಿ ಮೀನುಗಾರಿಕಾ ಇಲಾಖೆ ಆದೇಶ ಮಾಡಿದೆ.
ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ನಾಳೆಯಿಂದ ಜೂನ್ ೧ ರಿಂದ ಜುಲೈ ೩೦ರವರೆಗೆ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಮೀನುಗಾರಿಕೆ ನಡೆಸದಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.