ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ ೩೫ ದಿನಗಳಿಂದ ವಿದೇಶದಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಬಂಧಿಸಿದ ಬಳಿಕ ಇಂದು ೪೨ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು.
ಜೂನ್ ೬ರವರೆಗೆ ಎಸ್‌ಐಟಿಗೆ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಎಸ್‌ಐಟಿ ಪರ ಹಿರಿಯ ವಕೀಲ, ಎಸ್‌ಪಿಪಿ ಅಶೋಕ್ ನಾಯ್ಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ವಾದ ಮಂಡಿಸಿದರು. ಎಸ್‌ಐಟಿ ಕಚೇರಿಯಲ್ಲೇ ರಾತ್ರಿ ಕಳೆದಿದ್ದ ಪ್ರಜ್ವಲ್ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ಪರೀಕ್ಷೆಯ ನಂತರ ಪೊಲೀಸರು ೪೨ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ವಿಚಾರಣೆ ವೇಳೆ ಎಸ್‌ಐಟಿ ೧೫ ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಮಧ್ಯಾಹ್ನದ ನಂತರ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಜೂನ್ ೬ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು.