Saturday, April 19, 2025
Google search engine

Homeರಾಜ್ಯಸುದ್ದಿಜಾಲಲೋಕಸಭಾ ಚುನಾವಣೆ, ಜೂನ್ 4 ರಂದು ಮತ ಎಣಿಕೆ, ಮಧ್ಯಾಹ್ನದೊಳಗೆ ಫಲಿತಾಂಶ ಸಾಧ್ಯತೆ; ಡಾ. ವೆಂಕಟೇಶ್...

ಲೋಕಸಭಾ ಚುನಾವಣೆ, ಜೂನ್ 4 ರಂದು ಮತ ಎಣಿಕೆ, ಮಧ್ಯಾಹ್ನದೊಳಗೆ ಫಲಿತಾಂಶ ಸಾಧ್ಯತೆ; ಡಾ. ವೆಂಕಟೇಶ್ ಎಂ.ವಿ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 6.30 ರಿಂದ ಭದ್ರತಾ ಕೊಠಡಿ ತೆರೆಯುವ ಮೂಲಕ 8 ಗಂಟೆಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ಮತ ಎಣಿಕೆ ನಡೆಯಲಿದ್ದು ಚುನಾವಣಾ ಕಣದಲ್ಲಿದ್ದ 30 ಅಭ್ಯರ್ಥಿಗಳ ಫಲಿತಾಂಶ ಮಧ್ಯಾಹ್ನದೊಳಗೆ ಹೊರ ಬೀಳುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.


ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಹರಪನಹಳ್ಳಿ ಸೇರಿದಂತೆ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳು ಸೇರಿ 8 ಕ್ಷೇತ್ರಗಳ ಎಣಿಕೆಯು ಶಿವಗಂಗೋತ್ರಿಯಲ್ಲಿ ನಡೆಯಲಿದೆ. ಪ್ರತಿ ಕ್ಷೇತ್ರದಲ್ಲಿ 14 ಟೇಬಲ್‍ಗಳಲ್ಲಿ ಎಣಿಕೆ ನಡೆಯಲಿದ್ದು ಗರಿಷ್ಠ 19 ಸುತ್ತುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಸುತ್ತಿನಲ್ಲಿ ಎಲ್ಲಾಕ್ಷೇತ್ರಗಳಲ್ಲಿ ಎಣಿಕೆ ನಡೆದ ನಂತರ ಮುಂದಿನ ಸುತ್ತು ಎಣಿಕೆ ಆರಂಭಿಸಲಾಗುತ್ತದೆ ಎಂದರು.

ಪ್ರತಿ ಎಣಿಕೆ ಟೇಬಲ್‍ಗಳಲ್ಲಿ ಎಣಿಕೆ ಮೇಲ್ವಿಚಾರಕ, ಒಬ್ಬ ಎಣಿಕೆ ಸಹಾಯಕ, ಒಬ್ಬರು ಮೈಕ್ರೋ ಅಬ್ಸರ್‍ವರ್ ನೇಮಕ ಮಾಡಿದ್ದು ಎಲ್ಲಾ 8 ಕ್ಷೇತ್ರಗಳಿಗೆ 336 ಎಣಿಕೆ ಸಿಬ್ಬಂದಿಗಳನ್ನು ನೇಮಕ ಮಾಡಿ ಎರಡು ಹಂತದ ತರಬೇತಿ ನೀಡಲಾಗಿದೆ. ಮತ ಎಣಿಕೆ ಮುಕ್ತಾಯದ ನಂತರ ವಿವಿ ಪ್ಯಾಟ್ ಸ್ಲಿಪ್ ಎಣಿಕೆ ನಡೆಯಲಿದ್ದು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5 ಮತಗಟ್ಟೆಗಳಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿ ವಿವಿ ಪ್ಯಾಟ್ ಸ್ಲಿಪ್ ಎಣಿಕೆಮಾಡಲಾಗುತ್ತದೆ ಎಂದರು.

ಅಂಚೆ ಮತ ಎಣಿಕೆಗೆ ಪ್ರತ್ಯೇಕ ಟೇಬಲ್: 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರ, ಅಗತ್ಯ ಸೇವೆಗಳ ಗೈರು ಹಾಜರಿ ಮತದಾರರು, ಚುನಾವಣಾ ಕರ್ತವ್ಯ ನಿರತರು ಸೇರಿದಂತೆ 4918 ಅಂಚೆ ಮತಪತ್ರಗಳು ಸ್ವೀಕೃತವಾಗಿದ್ದು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲು 12 ಎಣಿಕೆ ಟೇಬಲ್‍ಗಳನ್ನು ಸ್ಥಾಪನೆ ಮಾಡಲಾಗಿದೆ. ಇದಕ್ಕಾಗಿ ಪ್ರತಿ ಟೇಬಲ್‍ಗೆ ಒಬ್ಬ ಸಹಾಯಕ ಚುನಾವಣಾಧಿಕಾರಿ, ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬ ಎಣಿಕೆ ಸಹಾಯಕರನ್ನು ನೇಮಕ ಮಾಡಲಾಗಿದೆ.

565 ಸೇವಾ ಮತದಾರರು; 565 ಸೇವಾ ಮತದಾರರಿಗೆ ಇ.ಟಿ.ಪಿ.ಬಿ.ಎಂ.ಎಸ್. ತಂತ್ರಾಂಶದ ಮೂಲಕ ಮತಪತ್ರಗಳನ್ನು ಕಳುಹಿಸಲಾಗಿದ್ದು ಮೇ ಅಂತ್ಯದವರೆಗೆ 298 ಮತಗಳು ಸ್ವೀಕೃತವಾಗಿವೆ. ಇವುಗಳನ್ನು ಸ್ವೀಕರಿಸಲು ಎಣಿಕೆ ದಿನ ಬೆಳಗ್ಗೆ 7.59 ಸಮಯದವರೆಗೆ ಸ್ವೀಕೃತವಾಗುವ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಇದನ್ನು ಎಣಿಕೆ ಮಾಡಲು 1 ಟೇಬಲ್ ಸ್ಥಾಪನೆ ಮಾಡಿ 4 ಜನ ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಹೆಚ್ಚಳಕ್ಕಾಗಿ ಸ್ವೀಪ್ ಸಮಿತಿಯಿಂದ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಮತದಾನ ಪ್ರಮಾಣ ಹೆಚ್ಚಳಕ್ಕೆ ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಭಿನಂದಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular