Sunday, April 20, 2025
Google search engine

Homeರಾಜ್ಯಕರ್ನಾಟಕಕ್ಕೆ ಮುಂಗಾರು ಪ್ರವೇಶ

ಕರ್ನಾಟಕಕ್ಕೆ ಮುಂಗಾರು ಪ್ರವೇಶ

ಬೆಂಗಳೂರು: ಉತ್ತರ ಭಾರತದಲ್ಲಿ ಬಿಸಿಗಾಳಿಗೆ ಜನರು ಪ್ರಾಣ ಬಿಡುತ್ತಿದ್ದರೆ ದಕ್ಷಿಣದಲ್ಲಿ ಮುಂಗಾರು ಮಳೆಯ ಸಿಂಚನ ಆಗುತ್ತಿದೆ. ಕೇರಳದಲ್ಲಿ ಈಗಾಗಲೇ ಮುಂಗಾರು ಮಳೆ ಸುರಿಯುತ್ತಿದೆ. ಕರ್ನಾಟಕಕ್ಕೆ ಇಂದು ಮುಂಗಾರು ಪ್ರವೇಶಿಸಲಿದ್ದು, ಮುಂದಿನ ಐದು ದಿನಗಳವರೆಗೆ ರಾಜ್ಯದ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ನಾಳೆ ಜೂನ್ ೩ರಂದು ಮುಂಗಾರು ಮಳೆ ಉತ್ತರ ಒಳನಾಡು ಪ್ರವೇಶ ಮಾಡೋ ಸಾಧ್ಯತೆಯಿದ್ದು ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

RELATED ARTICLES
- Advertisment -
Google search engine

Most Popular