ಧಾರವಾಡ : ಮೇ 7 ರಂದು ಜರುಗಿದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತ ಏಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಪ್ರತಿ ವಿಧಾನಸಭಾ ಮತಕ್ಷೇತ್ರಕ್ಕೆ 14 ಟೇಬಲಗಳಂತೆ ಒಟ್ಟು 112 ಟೇಬಲ್ ಗಳನ್ನು ಮತ ಏಣಿಕೆಗೆ ಸಿದ್ದಗೊಳಿಸಲಾಗಿದ್ದು, ಅಂದಾಜು 20 ಸುತ್ತುಗಳಲ್ಲಿ ಮತ ಏಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಯ ಮತ ಏಣಿಕೆ ಕಾರ್ಯದ ಸಿದ್ದತೆ ಮತ್ತು ಮತ ಏಣಿಕಾ ಕೇಂದ್ರದ ಕುರಿತು ಮಾಹಿತಿ ನೀಡಿ, ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಭಾರತ ಚುನಾವಣಾ ಆಯೋಗದ ಆದೇಶದಂತೆ ಮೊಬೈಲ್ ಹಾಗೂ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸಿಸ್ ಗಳನ್ನು ತರಲು ಅವಕಾಶವಿಲ್ಲ. ಮತ ಏಣಿಕಾ ಕೇಂದ್ರಕ್ಕೆ ಬರುವ ಅಭ್ಯರ್ಥಿಗಳು, ಮತ ಏಣಿಕಾ ಏಜಂಟರು, ಚುನಾವಣಾ ಏಜಂಟರು ಹಾಗೂ ಇತರರು ತಮ್ಮ ಮೊಬೈಲ್ ಗಳನ್ನು ಮತ ಏಣಿಕಾ ಕೇಂದ್ರದ ಹೊರಗೆ ಬಿಟ್ಟು ಬರಬೇಕು. ಒಂದು ವೇಳೆ ಮರೆತು ತಂದರೂ, ಅವರಿಗೆ ಪಸ್ಟ್ ಗೇಟ್ ದಲ್ಲಿ ಮೊಬೈಲ್ ಸಂಗ್ರಹ ಕೇಂದ್ರ ತೆರೆಯಲಾಗಿದ್ದು, ಅಲ್ಲಿ ಇಟ್ಟು ಚೀಟಿ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಮೊಬೈಲ್ ಹಾಗೂ ಇತರೆ ಡಿವೈಸ್ ಗಳನ್ನು ಮತ ಏಣಿಕಾ ಕೇಂದ್ರಕ್ಕೆ ತರಬಾರದೆಂದು ಅವರು ತಿಳಿಸಿದರು.
ಮತ ಏಣಿಕಾ ಕೇಂದ್ರದ ಸುತ್ತೂಲು 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಿಂದ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಏಣಿಕೆ ಕೇಂದ್ರದಲ್ಲಿ ಮತ್ತು ಸೂತ್ತಲು ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಚುನಾವಣಾ ವೇಳಾಪಟ್ಟಿ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಿದ್ದು, ಏಪ್ರಿಲ್ 19 ರಿಂದ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಮೇ 7 ರಂದು ಮತದಾನ ಜರಗಿದ್ದು, ಜೂನ್ 4 ರಂದು ಕೃಷಿ ವಿಶ್ವವಿದ್ಯಾಲಯದ ಮುಖ್ಯ ಕಟ್ಟಡದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಜೂನ್ 6 ಕ್ಕೆ ಪ್ರಸುತ್ತ ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿ ಮುಕ್ತಾಯ ಗೊಳ್ಳುವುದು ಎಂದು ಅವರು ತಿಳಿಸಿದರು.
ಮತ ಏಣಿಕಾ ಕೇಂದ್ರಕ್ಕೆ ಆಗಮಿಸುವವರನ್ನು ಮೂರು ಹಂತದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತದೆ. ರಾಜಕೀಯ ಪಕ್ಷಗಳ ಏಜಂಟರಿಗೆ, ಅಧಿಕಾರಿಗಳಿಗೆ ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕವಾದ ಸಂಚಾರ ಮಾರ್ಗಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ 144 ಕಲಂ ಜಾರಿಯಲ್ಲಿ ಇರುವದರಿಂದ ವಿಜಯೋತ್ಸವ ಆಚರಣೆ, ಪಟಾಕಿ ಹಚ್ಚುವುದನ್ನು ನಿರ್ಭಂಧಿಸಲಾಗಿದೆ ಎಂದು ಅವರು ತಿಳಿಸಿದರು.
ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಶಾಂತಿ , ಸುವ್ಯವಸ್ಥೆ ಕಾಪಾಡಲು ಸುಮಾರು 2500 ಪೊಲೀಸ ಅಧಿಕಾರಿ,ಸಿಬ್ಬಂದಿಗಳನ್ನು ಮತ್ತು 6 ಕೆಎಸ್.ಆರ್.ಪಿ ತುಕುಡಿಗಳನ್ನು ಹಾಗೂ 500 ಹೋಮ್ ಗಾರ್ಡ್ ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಉಪ ಪೊಲೀಸ್ ಆಯುಕ್ತ ಕುಶಲ್ ಚೌಕ್ಸೆ , ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಇದ್ದರು.