ಮಂಡ್ಯ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಿನ ಕರುಗಳ ರಕ್ಷಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ನಡೆದಿದೆ.
ಕಾರಿನಲ್ಲಿ ಕಸಾಯಿಖಾನೆಗೆ ಗೋವುಗಳ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಪಟ್ಟಣದಲ್ಲಿ ಕಾರನ್ನು ಅಡ್ಡಗಟ್ಟಿ 20 ಕ್ಕೂ ಹೆಚ್ಚು ಕರುಗಳನ್ನು ಹಿಂಜಾವೇ ಸಂಘಟನೆಯ ಕಾರ್ಯಕರ್ತರು ರಕ್ಷಿಸಿದ್ದಾರೆ.

ಕಾರ್ಯಕರ್ತರು ಕಾರು ಚಾಲಕನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.
ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.