ಮುಂಬೈ: ಐಎಎಸ್ ಅಧಿಕಾರಿಗಳ ಪುತ್ರಿಯೊಬ್ಬಳು ಇಂದು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ಕೇಡರ್ ಐಎಎಸ್ ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ ಲಿಪಿ ರಸ್ತೋಗಿ (೨೭) ಆತ್ಮಹತ್ಯೆಗೆ ಶರಣಾದ ಯುವತಿ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ.
ಕಾನೂನು ವಿದ್ಯಾರ್ಥಿನಿಯಾಗಿದ್ದ ಲಿಪಿ, ಇಂದು ಮುಂಜಾನೆ ೪ ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದ ೧೦ನೇ ಮಹಡಿಯಿಂದ ಜಿಗಿದಿದ್ದಾರೆ. ಆಕೆಯ ಕೋಣೆಯಲ್ಲಿ ಡೆತ್ ನೋಟ್ ಒಂದು ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.