Monday, April 21, 2025
Google search engine

Homeರಾಜ್ಯಸುದ್ದಿಜಾಲಎನ್‌ಡಿಆರ್‌ಎಫ್ ತಂಡ ಜಿಲ್ಲಾಧಿಕಾರಿ ಭೇಟಿ: ಚರ್ಚೆ

ಎನ್‌ಡಿಆರ್‌ಎಫ್ ತಂಡ ಜಿಲ್ಲಾಧಿಕಾರಿ ಭೇಟಿ: ಚರ್ಚೆ

ಮಡಿಕೇರಿ : ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸುವ ಸಂಬಂಧ ಈಗಾಗಲೇ ಆಗಮಿಸಿರುವ ಎನ್‌ಡಿಆರ್‌ಎಫ್ ತಂಡ ಸೋಮವಾರ ಜಿಲ್ಲಾಧಿಕಾರಿ ವೆಂಕಟ್ ರಾಜ ಅವರನ್ನು ಭೇಟಿ ಮಾಡಿ ಮಳೆಗಾಲದಲ್ಲಿ ಅನುಸರಿಸಬೇಕಾದ ಚಟುವಟಿಕೆಗಳ ಕುರಿತು ಚರ್ಚಿಸಿತು. ಅಜಯ್ ಕುಮಾರ್ ನೇತೃತ್ವದ ಎನ್‌ಡಿಆರ್‌ಎಫ್ ತಂಡ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಮಳೆ ಸಂಬಂಧ ಹವಾಮಾನ ಇಲಾಖೆ ಮಾಹಿತಿಗಳನ್ನು ಕಾಲಕಾಲಕ್ಕೆ ಬಿಡುಗಡೆ ಮಾಡಲಾಗಿದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಿ, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಬೇಕು. ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞೆ ಅನನ್ಯಾ ವಾಸುದೇವ, ಎನ್‌ಡಿಆರ್‌ಎಫ್ ತಂಡದ ಮುಖಂಡರು ಉಪಸ್ಥಿತರಿದ್ದರು. ಬೆಂಗಳೂರಿನ ಆರ್ ಆರ್ ಸಿ ವಿಭಾಗದಿಂದ ಎನ್ ಡಿಆರ್ ಎಫ್ ತಂಡ ಆಗಮಿಸಿದೆ.

RELATED ARTICLES
- Advertisment -
Google search engine

Most Popular