ಹಾಸನ: ಲೋಸಕಭಾ ಚುನಾವಣೆಯ ಮತೆಣಿಕೆ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದಾರೆ.
ಹಾಲಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ೫,೨೦೧ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ೧೫ ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರಮುಖವಾಗಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕಣದಲ್ಲಿದ್ದಾರೆ.