ಬೆಂಗಳೂರು: ಅತ್ಯಚಾರ ಆರೋಪಿ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಚುನಾವಣಾ ಫಲಿತಾಂಶ ನೋಡುವ ಭಾಗ್ಯ ಸಿಕ್ಕಿದೆ.
ರಿಸಲ್ಟ್ ನೋಡುವ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡ (SIT) ಕಚೇರಿಯಲ್ಲಿ ಫಲಿತಾಂಶ ನೋಡುತ್ತಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ಅವರು ಲೋಕಸಭಾ ಚುನಾವಣೆಯ ಫಲಿತಾಂಶ ನೋಡಲು ಅವಕಾಶ ನೀಡಬೇಕು ಎಂದು ಜಡ್ಜ್ ಮುಂದೆ ಮನವಿ ಮಾಡಿಕೊಂಡಿದ್ದರು. ಆಗ ಕೋರ್ಟ್, ಪರಿಸ್ಥಿತಿ ನೋಡಿಕೊಂಡು ವ್ಯವಸ್ಥೆ ಮಾಡಿಕೊಳ್ಳಲಾಗುವುದಾಗಿ ತಿಳಿಸಿತ್ತು. ಅಂತೆಯೇ ಇದೀಗ ಎಸ್‌ಐಟಿ ಕಚೇರಿಯಲ್ಲಿ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಫಲಿತಾಂಶ ವೀಕ್ಷಿಸುತ್ತಿದ್ದಾರೆ.