ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ 89137 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಈ ಬಾರಿ ಭಾರೀ ಕುತೂಹಲ ಮೂಡಿಸಿರುವ ಕ್ಷೇತ್ರಗಳಲ್ಲಿ ಒಂದಾಗಿದ್ದು, ಈ ಬಾರಿ ಮೈಸೂರು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಯದುವೀರ್ ಒಡೆಯರ್ ಅವರ ಎದುರಾಳಿಯಾಗಿ ಕಾಂಗ್ರೆಸ್ನಿಂದ ಎಂ. ಲಕ್ಷಣ್ ಸ್ಪರ್ಧಿಸಿದ್ದಾರೆ.
2009ರ ಚುನಾವಣೆಯಲ್ಲಿ ಕೊಡಗು ಜಿಲ್ಲೆಯನ್ನು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಸೇರ್ಪಡೆ ಮಾಡಲಾಯಿತು. ಮೈಸೂರು- ಕೊಡಗು ಕ್ಷೇತ್ರದಲ್ಲಿ ನಡೆದಿರುವ ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಅತಿ ಹೆಚ್ಚು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಮೈಸೂರು ರಾಜವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು 4 ಬಾರಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡಿದ್ದರು. ಈ ಬಾರಿ ಯದುವೀರ್ ಒಡೆಯರ್ ಸ್ಪರ್ಧಿಸಿದ್ದು, ಗೆಲುವಿನ ಸಾಧ್ಯತೆ ಹೆಚ್ಚಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ 18 ಮಂದಿ ಸ್ಪರ್ಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ನಡುವೆ ಮಾತ್ರ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ರಾಜ್ಯ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ ಎಂ. ಲಕ್ಷ್ಮಣ್ ಇದೇ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ತೀವ್ರ ಪೈಪೋಟಿಯಿದ್ದರೂ ಬಿಜೆಪಿಯ ಯದುವೀರ್ ಒಡೆಯರ್ಗೆ ಭಾರೀ ಅಂತರದ ಗೆಲುವು ಸಿಗುವುದು ಪಕ್ಕಾ ಎನ್ನಲಾಗುತ್ತಿದೆ.