Sunday, April 20, 2025
Google search engine

Homeಸ್ಥಳೀಯಯದುವೀರ್ ಒಡೆಯರ್ ನಾಮಫಲಕಕ್ಕೆ ಪೂಜೆ

ಯದುವೀರ್ ಒಡೆಯರ್ ನಾಮಫಲಕಕ್ಕೆ ಪೂಜೆ

ಮೈಸೂರು: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲುವಿನತ್ತ ದಾಪುಗಾಲಿಡುತ್ತಿದ್ದಾರೆ. ೮೦ ಸಾವಿರ ಮತಗಳ ಲೀಡ್ ಬರುತ್ತಿದ್ದಂತೆ ಯದುವೀರ್, ಸಂಸದರು ಎಂಬ ನಾಮಫಲಕಕ್ಕೆ ಚಾಮುಂಡೇಶ್ವರಿ ದೇವಾಲಯದಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.

ಪೂಜೆ ಸಲ್ಲಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ನಾಮಫಲಕ ಮಾಡಿಸಿ ಪೂಜೆ ಸಲ್ಲಿಸಿದ್ದಾರೆ. ವೈರಲ್ ಆಗಿರುವ ಫೋಟೋದಲ್ಲಿ ಯದುವೀರ್ ಕೃಷ್ಣದತ್ತ ಒಡೆಯರ್, ಸಂಸದರು, ಮೈಸೂರು – ಕೊಡಗು ಕ್ಷೇತ್ರ ಎಂದು ಬರೆಯಲಾಗಿದೆ.

ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್‌ನಿಂದ ಎಂ.ಲಕ್ಷ್ಮಣ್ ಕಣಕ್ಕಿಳಿದಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ ೧೨ ಗಂಟೆಯ ಹೊತ್ತಿಗೆ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -೩೪೩೬೩೬ ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್-೪೩೯೯೬೭ ಮತಗಳಿಸಿ ೯೬೩೩೧ ಮತಗಳ ಮುನ್ನಡೆಯಲ್ಲಿದ್ದಾರೆ. ೭,೬೧,೧೮೪ ಮತಗಳ ಎಣಿಕೆ ಪೂರ್ಣಗೊಂಡಿದ್ದು, ೧೪,೭೭,೭೫೧ ಮತ ಚಲಾವಣೆಯಾಗಿತ್ತು.

RELATED ARTICLES
- Advertisment -
Google search engine

Most Popular