ದೆಹಲಿ: ಅಮೇಠಿಯಲ್ಲಿ ಬಿಜೆಪಿಯ ಹಾಲಿ ಸಂಸದೆ ಸ್ಮೃತಿ ಇರಾನಿಗೆ ಹಿನ್ನಡೆಯಾಗಿದೆ. ಇಲ್ಲಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ಮುಂದೆ ಇದ್ದಾರೆ. ಸ್ಮೃತಿ ಇರಾನಿ ಈ ಸ್ಥಾನದಿಂದ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದು ರಾಹುಲ್ ಗಾಂಧಿ ಅವರ ಕುಟುಂಬದ ಸಹಾಯಕ ಕೆಎಲ್ ಶರ್ಮಾ ಅವರು ಕಾಂಗ್ರೆಸ್ ಭದ್ರಕೋಟೆಯಿಂದ ಸಂಸತ್ತಿಗೆ ಪಾದಾರ್ಪಣೆ ಮಾಡುವ ಭರವಸೆಯಲ್ಲಿದ್ದಾರೆ. ಅಂಚೆ ಮತ ಎಣಿಕೆಯಿಂದ ಬೆಳಗ್ಗೆ ೧೧.೧೨ರ ಟ್ರೆಂಡ್‌ಗಳ ಪ್ರಕಾರ, ಶರ್ಮಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸ್ಮೃತಿ ಇರಾನಿಗಿಂತ ೨೭,೦೦೦ ಮತಗಳಿಂದ ಮುಂದಿದ್ದಾರೆ.
೨೦೧೯ ರ ಲೋಕಸಭಾ ಚುನಾವಣೆಯಲ್ಲಿ, ಸ್ಮೃತಿ ಇರಾನಿ ಅವರು ಅಮೇಠಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದರಾಗಿದ್ದ ರಾಹುಲ್ ಗಾಂಧಿ ಅವರನ್ನು ೪ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ೨೦೦೪ ರಿಂದ ಅಮೇಠಿ ಸ್ಥಾನವನ್ನು ಪ್ರತಿನಿಧಿಸಿದ್ದು, ೨೦೧೯ ರವರೆಗೆ ಸತತ ಮೂರು ಅವಧಿಗೆ ಕ್ಷೇತ್ರದಿಂದ ಸಂಸತ್ತಿನ ಸದಸ್ಯರಾಗಿದ್ದರು.