ಮೈಸೂರು:ಬಿಜೆಪಿ ಹಾಗೂ ಜೆಡಿಎಸ್ ಮೈಸೂರು- ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಯದುವೀರ್ ಒಡೆಯರ್ ಸೇನೆ ವತಿಯಿಂದ ಪ್ರವಾಸಿಗರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಮೈಸೂರು ಪಾಕ್ ವಿತರಿಸಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಯದುವೀರ್ ಒಡೆಯರ್ ರವರಿಗೆ ಜೈಕಾರ ಕೂಗಿ ಸಂಭ್ರಮಿಸಿದರು.

ಇದೇ ಸಂದರ್ಭದಲ್ಲಿ ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಯದುವೀರ್ ಒಡೆಯರ್ ಸೇನೆ ಅಧ್ಯಕ್ಷ ಬೈರತಿ ಲಿಂಗರಾಜು, ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಜನಸೇವಕ ಯುವ ಬ್ರಿಗೇಡ್ ಅಧ್ಯಕ್ಷ ರಾಘವೇಂದ್ರ, ವಿಪ್ರ ಮುಖಂಡರಾದ ಮಹೇಶ್ ಕುಮಾರ್, ಸಚಿಂದ್ರ, ಸ್ಥಳೀಯ ವ್ಯಾಪಾರಿಗಳಾದ ಲಕ್ಷ್ಮಣ್, ಸುಬ್ಬರಾವ್, ಕುಮಾರ್ , ಚಂದ್ರಶೇಖರ್, ಗಿರಿಜಮ್ಮ, ಎಸ್ ಎನ್ ರಾಜೇಶ್, ರಾಕೇಶ್, ದುರ್ಗಾ ಪ್ರಸಾದ್, ಮಹದೇವ ಪ್ರಸಾದ್, ಹಾಗೂ ಇನ್ನಿತರರು ಹಾಜರಿದ್ದರು.