Sunday, April 20, 2025
Google search engine

Homeರಾಜ್ಯವಿಶ್ವ ಪರಿಸರ ದಿನಾಚರಣೆ: ಪರಿಸರ ಸಮತೋಲನಕ್ಕಾಗಿ ಕಚೇರಿ ಆವರಣ, ಸರ್ಕಾರಿ ಜಾಗದಲ್ಲಿ ಸಸಿ ಬೆಳೆಸಿ

ವಿಶ್ವ ಪರಿಸರ ದಿನಾಚರಣೆ: ಪರಿಸರ ಸಮತೋಲನಕ್ಕಾಗಿ ಕಚೇರಿ ಆವರಣ, ಸರ್ಕಾರಿ ಜಾಗದಲ್ಲಿ ಸಸಿ ಬೆಳೆಸಿ

ದಾವಣಗೆರೆ : ಪರಿಸರ ಸಮತೋಲನಕ್ಕಾಗಿ ಜಿಲ್ಲಾಡಳಿತ ಭವನ ಸೇರಿದಂತೆ ಕಚೇರಿಗಳ ಆವರಣದಲ್ಲಿ ಗಿಡ, ಮೂರು ಬೆಳೆಸಲು ಈ ವರ್ಷ ಸಸಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಜೂನ್ 5 ರಂದು ಜಿಲ್ಲಾಡಳಿತ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಅವರು ಇಲಾಖೆಗಳ ಅವರಣ ಮತ್ತು ನೀರು ಪೂರೈಕೆ ಮಾಡುವ ಟ್ಯಾಂಕ್ ಗಳ ಸುತ್ತಮುತ್ತ ಹಾಗೂ ಖಾಲಿ ಇರುವ ಸರ್ಕಾರಿ ಜಾಗಗಳಲ್ಲಿ ಸಸಿ ನೆಡುವ ಮೂಲಕ ಪರಿಸರ ಸಮತೋಲನ ಕಾಯ್ದುಕೊಳ್ಳಲು ಯೋಜಿಸಲಾಗಿದೆ. ಜಿಲ್ಲೆಯ ರೈತ ಸಂಘಟನೆಗಳು ಸಹ ಪರಿಸರ ಸಂರಕ್ಷಣೆಗೆ ಗಿಡ, ಮರಬೆಳೆಸಲು ಮುಂದೆ ಬಂದಿದ್ದಾರೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಎಸ್.ಪಿ. ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನಾ ಭಾನು ಎಸ್.ಬಳ್ಳಾರಿ, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ಇನ್ನಿತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular