Monday, April 21, 2025
Google search engine

Homeರಾಜ್ಯಮೋದಿ 3.0 ಸರ್ಕಾರದಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಕೃಷಿ ಖಾತೆ?

ಮೋದಿ 3.0 ಸರ್ಕಾರದಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಕೃಷಿ ಖಾತೆ?

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಎನ್ ಡಿಎ ಮೈತ್ರಿಕೂಟ ಈಗಾಗಲೇ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು, ಈ ನಡುವೆ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಜೂನ್ ೮ ರಂದು ಪ್ರಧಾನಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್. ೮ ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ದಾಖಲೆಯ ಮೂರನೇ ಅವಧಿಗೆ ಆಯ್ಕೆಯಾದ ಪ್ರಧಾನಿ ಮೋದಿ ಅವರಿಗೆ ೯೫ ಕ್ಕೂ ಹೆಚ್ಚು ವಿಶ್ವ ನಾಯಕರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular