Sunday, April 20, 2025
Google search engine

Homeಅಪರಾಧಸಮಯಪ್ರಜ್ಞೆ ಮೆರೆದು ವಿದ್ಯಾರ್ಥಿಗಳನ್ನು ಪಾರು ಮಾಡಿದ ಚಾಲಕ: ಹೃದಯಾಘಾತದಿಂದ ಸಾವು

ಸಮಯಪ್ರಜ್ಞೆ ಮೆರೆದು ವಿದ್ಯಾರ್ಥಿಗಳನ್ನು ಪಾರು ಮಾಡಿದ ಚಾಲಕ: ಹೃದಯಾಘಾತದಿಂದ ಸಾವು

ಮಣಿಪಾಲ: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಅಲ್ವಿನ್ ಡಿಸೋಜಾ (೫೩) ಮೃತ ವ್ಯಕ್ತಿ. ಅಪಘಾತದ ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಘಟನೆಯಲ್ಲಿ ಗಾಯಗೊಂಡಿರುವ ಇತರ ಐವರು ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ನಾಲ್ವರು ವಿದ್ಯಾರ್ಥಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವ ವಿದ್ಯಾರ್ಥಿ ಇನ್ನೂ ಚಿಕಿತ್ಸೆ ಮುಂದುವರಿದಿದೆ.

ನಿನ್ನೆ ಸಂಜೆ ವೇಳೆ ಪೆರಂಪಳ್ಳಿ ಈ ಘಟನೆ ನಡೆದಿದ್ದು ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು. ಹೃದಯಾಘಾತ ಸಂಭವಿಸಿದಾಗ ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದ್ದರು ಇದರಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಗಾಯಗೊಂಡ ವಿದ್ಯಾರ್ಥಿಗಳನ್ನು ಮತ್ತು ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದುರಾದೃಷ್ಟವಶಾತ್ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

RELATED ARTICLES
- Advertisment -
Google search engine

Most Popular