Saturday, April 19, 2025
Google search engine

Homeರಾಜ್ಯವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಬಿಜೆಪಿಯಿಂದ ಇಂದು ರಾಜಭವನ ಚಲೋ

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಬಿಜೆಪಿಯಿಂದ ಇಂದು ರಾಜಭವನ ಚಲೋ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರ ಕುರಿತಂತೆ ಸಚಿವ ನಾಗೇಂದ್ರ ವಜಾಗೊಳಿಸುವಂತೆ ಆಗ್ರಹಿಸಿ ಇಂದು ಗುರುವಾರ ಬಿಜೆಪಿ ರಾಜಭವನ ಚಲೋ ನಡೆಸಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರಿ ನೀಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

RELATED ARTICLES
- Advertisment -
Google search engine

Most Popular