Sunday, April 20, 2025
Google search engine

Homeರಾಜ್ಯವಾಲ್ಮೀಕಿ ನಿಗಮ ಹಗರಣ ಸಹಕಾರಿ ಬ್ಯಾಂಕ್ ನಲ್ಲಿದ್ದ 45 ಕೋಟಿ ರೂ. ಜಪ್ತಿ

ವಾಲ್ಮೀಕಿ ನಿಗಮ ಹಗರಣ ಸಹಕಾರಿ ಬ್ಯಾಂಕ್ ನಲ್ಲಿದ್ದ 45 ಕೋಟಿ ರೂ. ಜಪ್ತಿ

ಹೈದರಾಬಾದ್ : ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ನಲ್ಲಿದ್ದ ೪೫ ಕೋಟಿ ರೂ. ಹಣವನ್ನು ಎಸ್‌ಐಟಿ ಜಪ್ತಿ ಮಾಡಿದೆ.

ಬಂಧಿತ ಆರೋಪಿ ಸತ್ಯನಾರಾಯಣ್ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ಖಾತೆಗೆ ೯೪.೭೩ ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್?ನ ೧೮ ನಕಲಿ ಖಾತೆಗಳಿಗೆ ೯೪.೭೩ ಕೋಟಿ ರೂ. ವರ್ಗಾವಣೆಯಾಗಿತ್ತು. ವರ್ಗಾವಣೆಯಾಗಿದ್ದ ೯೪.೭೩ ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿತ್ತು. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್?ಐಟಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಐವರೆಗೆ ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಎಂಬ ಐದು ಜನರನ್ನು ಬಂಧಿಸಿದ್ದು, ಐವರನ್ನು ಕಸ್ಟಡಿಗೆ ಪಡೆದು ಎಸ್‌ಐಟಿ ವಿಚಾರಣೆ ನಡೆಸುತ್ತಿದೆ.

ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೊಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಮೇ ೨೬ರಂದು ಆತ್ಮಹತ್ಯೆಗೆ ಶರಣಾಗಿದ್ದು, ಅವರ ಡೆತ್ ನೋಟ್‌ನಲ್ಲಿ ನಿಗಮದ ಬ್ಯಾಂಕ್ ಖಾತೆಯಿಂದ ೮೯.೬೨ ಕೋಟಿ ರೂ.ಗಳನ್ನು ಅನಧಿಕೃತವಾಗಿ ವರ್ಗಾವಣೆ ಮಾಡಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ವಿನೋಬಾ ನಗರದ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರನ್ ಅವರ ಪತ್ನಿ ದಾಖಲಿಸಿರುವ ದೂರು ಹಾಗೂ ಮೃತ ಅಧಿಕಾರಿಯ ಡೆತ್ ನೋಟ್ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆ.

RELATED ARTICLES
- Advertisment -
Google search engine

Most Popular