Tuesday, April 22, 2025
Google search engine

Homeರಾಜ್ಯಸುದ್ದಿಜಾಲಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

ಚಂದನ್ ಶೆಟ್ಟಿ-ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಟಾರ್ ಜೋಡಿಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದ ಸಂಗೀತ ನಿರ್ದೇಶಕ ಚಂದನ್ ಗೌಡ ಹಾಗೂ ಬಿಗ್ ಬಾಸ್ ಮೂಲಕವೇ ಫೇಮ್ ಪಡೆದುಕೊಂಡಿದ್ದ ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಳ್ಳಲು ಅರ್ಜಿ ಹಾಕಿದ್ದಾರೆ.

ಬಿಗ್ ಬಾಸ್ ಐದನೇ ಸೀಸನ್ ನಲ್ಲಿ ಚಂದನ್ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್ ಬಾಸ್ ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್ ಗೌಡ ಬಳಿಕ ಮದುವೆಯಾಗಿದ್ದರು. ಅದಾದ ಬಳಿಕ ಇವರಿಬ್ಬರ ನಡುವೆ ಪ್ರೀತಿ ಇದೆ ಎನ್ನುವ ಗುಸುಗುಸುಗಳ ನಡುವೆ, ೨೦೨೦ರ ಫೆಬ್ರವರಿ ೨೬ರಂದು ಮೈಸೂರಿನ ಯುವ ದಸರಾ ಕಾರ್ಯಕ್ರಮದಲ್ಲಿ ಅವರು ಚಂದನ್ ಶೆಟ್ಟಿ ಸಾರ್ವಜನಿಕವಾಗಿ ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ್ದರು. ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು.

ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರ ವಿಚ್ಛೇದನಕ್ಕೆ ಕಾರಣವೇನು ಅನ್ನೋದರ ಬಗ್ಗೆ ಇನ್ನೂ ಗೊಂದಲಗಳಿವೆ ಎನ್ನಲಾಗಿದೆ. ಪರಸ್ಪರ ಒಪ್ಪಿಗೆಯ ಮೂಲಕ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರೂ ಕೂಡ, ಇಬ್ಬರ ನಡುವಿನ ದಾಂಪತ್ಯ ತೋರಿಕೆಯಲ್ಲಿ ಮಾತ್ರವೇ ಚೆನ್ನಾಗಿತ್ತು ಎನ್ನುವ ಮಾತುಗಳೂ ಇವೆ. ಕೆಲವು ಮೂಲಗಳ ಪ್ರಕಾರ ನಿವೇದಿತಾ ಗೌಡಗೆ ಇದ್ದ ಸೋಶಿಯಲ್ ಮೀಡಿಯಾ ಕ್ರೇಜ್ ನಿಂದಾಗಿಯೇ ಅವರ ಮದುವೆ ವಿಚ್ಚೇದನದವರೆಗೆ ಮುಂದುವರಿದಿದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular