Monday, April 21, 2025
Google search engine

Homeರಾಜಕೀಯಲೋಕಸಭಾ ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ: ಸಚಿವ ಎಂ.ಬಿ.ಪಾಟೀಲ್

ಲೋಕಸಭಾ ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, “ಕಳೆದ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ. ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು ಎಂದರು.

ಈಗ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಲ ಅವರ ಸರ್ಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶ್​ ಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರ್ಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ ಎಂದು ಭವಿಷ್ಯ ನುಡಿದರು.

RELATED ARTICLES
- Advertisment -
Google search engine

Most Popular