Sunday, April 20, 2025
Google search engine

Homeರಾಜ್ಯಇಂದು ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ : ಡಾ.ಮಂಜುನಾಥ್ ಮಾಹಿತಿ

ಇಂದು ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ : ಡಾ.ಮಂಜುನಾಥ್ ಮಾಹಿತಿ

ನವದೆಹಲಿ : ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನೂತನ ಸಂಸದ ಡಾ.ಮಂಜುನಾಥ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೇಂದ್ರ ಸಚಿವರಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿ ಸಚಿವರಾಗುತ್ತಿರುವುದು ಖುಷಿ ತಂದಿದೆ. ಜೆಡಿಎಸ್ ನಾಯಕರು, ಕಾರ್ಯಕರ್ತರಿಗೆ ಇದು ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ತಿಳಿದ್ದಾರೆ.

ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪಂಡಿತ್ ಜವಾಹರಲಾಲ್ ನೆಹರು ನಂತರ ಭಾರತೀಯ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಎರಡನೇ ವ್ಯಕ್ತಿಯಾಗಲಿದ್ದಾರೆ.

ಮೋದಿ ೩.೦ ಸಂಪುಟದ ಭಾಗವಾಗಿ ೩೦ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವರದಿಯ ಪ್ರಕಾರ, ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸುಮಾರು ೩೦ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸಿದ ನಂತರ, ಗೃಹ, ರಕ್ಷಣಾ, ಹಣಕಾಸು, ವಿದೇಶಾಂಗ ವ್ಯವಹಾರಗಳು ಮತ್ತು ನಾಗರಿಕ ವಿಮಾನಯಾನ ಸೇರಿದಂತೆ ಪ್ರಮುಖ ಖಾತೆಗಳನ್ನು ಹಂಚಿಕೆ ಮಾಡುವ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

RELATED ARTICLES
- Advertisment -
Google search engine

Most Popular