ಬೆಂಗಳೂರು: ೨೦೧೯ರ ಏಪ್ರಿಲ್ ೧ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ ೧೨ರವರೆಗೆ ಗಡುವು ನೀಡಿದ್ದು, ಇನ್ನು ಮೂರು ದಿನಗಳಲ್ಲಿ ಮುಕ್ತಾಯವಾಗಲಿದೆ.
ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ ೧೨ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಏಪ್ರಿಲ್.೧, ೨೦೧೯ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ.
ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 94498 63429/94498 63426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.