Monday, April 21, 2025
Google search engine

Homeಅಪರಾಧನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಐದು ವರ್ಷದ ಮಗನ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಐದು ವರ್ಷದ ಮಗನ ಶವ ಪತ್ತೆ

ಉತ್ತರಪ್ರದೇಶ: ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ ಹಾಗೂ ಐದು ವರ್ಷದ ಮಗನ ಶವ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಮಹಾರಾಜ್​ಗಂಜ್​ನಲ್ಲಿ ನಡೆದಿದೆ.

ವಂದನಾ ಮತ್ತು ಆಕೆಯ ಮಗ ಚಿಂಟು ಸದರ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈಜನಾಥಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಆತಿಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮಹಿಳೆಯ ಪತಿ ಶೇಷಮಣಿ ರಾಜ್‌ಭರ್ ಅವರು ಆಗಾಗ ಜಗಳವಾಡುತ್ತಿದ್ದರು ಮತ್ತು ಘಟನೆಯ ಮೊದಲು ಕೂಡ ಜಗಳವಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಎಎಸ್‌ಪಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular