ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.
ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ.
ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.
ಈ ಘಟನೆ ನಡೆದಿದ್ದು ಜೂನ್ 9ರಂದು. ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ವಿನಯ್ ಎನ್ನುವವರಿಗೆ ಸೇರಿದ ಶೆಡ್ ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ.
ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು, ಆ ಕೇಸ್ನಲ್ಲಿ ಸ್ಯಾಂಡಲ್ವುಡ್ ನಟನನ್ನು ಪ್ರಶ್ನಿಸಲಾಗುತ್ತಿದೆ, ಭಾನುವಾರ ಯುವಕನ ಕೊಲೆಯಾಗಿತ್ತು ಸಿಸಿಟಿವಿ ಪರಿಶೀಲಿಸಿ ವ್ಯಕ್ತಿ ಗುರುತು ಪತ್ತೆಹಚ್ಚಲಾಗಿತ್ತು.
ರೇಣುಕಾ ಸ್ವಾಮಿ ಎಂದು ಯುವಕನ ಗುರುತುಪತ್ತೆಯಾಗಿದ್ದು, ಚಿತ್ರದುರ್ಗ ಮೂಲದ ಯುವಕ ರೇಣುಕಾ ಸ್ವಾಮಿ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ ಸಹಚರರನ್ನು ಬಂಧಿಸಿದ್ದೇವೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ವಿಚಾರಣೆ ಮಾಡ್ತಿದ್ದೇವೆ, ಹೆಚ್ಚಿನ ಮಾಹಿತಿ ಕೊಡಲು ಆಗಲ್ಲ, ಮಾಹಿತಿ ಇನ್ನಷ್ಟು ತಿಳಿಯಬೇಕಿದೆ ಎಂದು ದಯಾನಂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.